ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;
TSK
TSK · ಧರ್ಮೋಪದೇಶಕಾಂಡ 3:28
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
¶ ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.
¶ ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
¶ ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
¶ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.
¶ ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.