TSK

TSK · ಧರ್ಮೋಪದೇಶಕಾಂಡ 30:13

مراجع Treasury of Scripture Knowledge في ಕನ್ನಡ IRV.

العودة إلى المقطع

ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.

‹ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.›

ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.

¶ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?