TSK

TSK · ಧರ್ಮೋಪದೇಶಕಾಂಡ 30:4

مراجع Treasury of Scripture Knowledge في ಕನ್ನಡ IRV.

العودة إلى المقطع

ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.

ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.

¶ ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.

¶ “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.

ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.