ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
TSK
TSK · ಧರ್ಮೋಪದೇಶಕಾಂಡ 32:12
مراجع Treasury of Scripture Knowledge في ಕನ್ನಡ IRV.
ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.
ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.