TSK

TSK · ಧರ್ಮೋಪದೇಶಕಾಂಡ 32:19

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.

ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?

ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.

‹ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.›