TSK

TSK · ಧರ್ಮೋಪದೇಶಕಾಂಡ 32:31

مراجع Treasury of Scripture Knowledge في ಕನ್ನಡ IRV.

العودة إلى المقطع

ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.

ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?

“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.

ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.

ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.

ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.

¶ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;