TSK

TSK · ಧರ್ಮೋಪದೇಶಕಾಂಡ 4:24

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.

ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.

ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.

ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.

ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.

ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.

ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.

ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.

ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.

¶ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!

ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?