TSK

TSK · ಧರ್ಮೋಪದೇಶಕಾಂಡ 4:33

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

¶ ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.

¶ ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.

ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?

ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.