TSK

TSK · ಧರ್ಮೋಪದೇಶಕಾಂಡ 5:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.

ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.

ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.

¶ “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

‹ಹೇಗೆಂದರೆ›‹‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ›‹ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.›

‹‘ನಿನ್ನ›‹ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು›‹‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.›

‹‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ”› ಎಂದು ಹೇಳಿದನು.

ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.