TSK

TSK · ಧರ್ಮೋಪದೇಶಕಾಂಡ 6:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.

ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.

¶ ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.

ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.

ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.

¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.