TSK

TSK · ಧರ್ಮೋಪದೇಶಕಾಂಡ 6:13

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.

ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”

¶ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,

ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.

ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.

ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.

ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.

‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.

ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.

ಯೇಸು ಅವನಿಗೆ, ‹“ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’›‹ಎಂಬುದಾಗಿ ಬರೆದಿದೆಯಲ್ಲಾ”› ಎಂದು ಹೇಳಿದನು.