¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
TSK
TSK · ಧರ್ಮೋಪದೇಶಕಾಂಡ 6:21
مراجع Treasury of Scripture Knowledge في ಕನ್ನಡ IRV.
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.
ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.
ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,