ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
TSK
TSK · ಧರ್ಮೋಪದೇಶಕಾಂಡ 7:12
مراجع Treasury of Scripture Knowledge في ಕನ್ನಡ IRV.
ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
¶ ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.
ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.