TSK

TSK · ಧರ್ಮೋಪದೇಶಕಾಂಡ 7:16

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.

ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.

ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.

ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.

ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.

ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.

ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.

ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.