¶ ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.
TSK
TSK · ಧರ್ಮೋಪದೇಶಕಾಂಡ 7:24
مراجع Treasury of Scripture Knowledge في ಕನ್ನಡ IRV.
ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು
ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.
¶ ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.
ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.