¶ ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
TSK
TSK · ಪ್ರಸಂಗಿ 10:13
مراجع Treasury of Scripture Knowledge في ಕನ್ನಡ IRV.
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
¶ ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,
ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.
ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
¶ ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
¶ ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
¶ ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.