TSK

TSK · ಪ್ರಸಂಗಿ 11:5

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”

ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.

ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.

ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.

ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.

ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?

ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.