TSK

TSK · ಪ್ರಸಂಗಿ 2:14

مراجع Treasury of Scripture Knowledge في ಕನ್ನಡ IRV.

العودة إلى المقطع

ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.

ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.

ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?

ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.

¶ ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.

¶ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.

ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.