ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
TSK
TSK · ಪ್ರಸಂಗಿ 2:18
مراجع Treasury of Scripture Knowledge في ಕನ್ನಡ IRV.
ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
¶ ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
¶ ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
‹ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.›
¶ ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.