TSK

TSK · ಪ್ರಸಂಗಿ 3:13

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.

ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.

¶ ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.

ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.

ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.