TSK

TSK · ಪ್ರಸಂಗಿ 3:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.

¶ ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.

ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.

¶ ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.

¶ ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.

ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.

ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.

ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.

ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.

ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.

ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.

ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ.

ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.

ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.