TSK

TSK · ಪ್ರಸಂಗಿ 6:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.

ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.

¶ ‹“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.›

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.