TSK

TSK · ಪ್ರಸಂಗಿ 7:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?

ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.

ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,

ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!

ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.

ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.

“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.

¶ ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.