TSK

TSK · ಪ್ರಸಂಗಿ 7:16

مراجع Treasury of Scripture Knowledge في ಕನ್ನಡ IRV.

العودة إلى المقطع

ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.

¶ ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.

¶ ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,

‹ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ›‹ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.›

‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,›

‹ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.›

¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

¶ ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”

ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.

ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.