TSK

TSK · ಪ್ರಸಂಗಿ 9:5

مراجع Treasury of Scripture Knowledge في ಕನ್ನಡ IRV.

العودة إلى المقطع

ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.

ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.

ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.

ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”

ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.

ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.