TSK

TSK · ಎಫೆಸದವರಿಗೆ 2:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.

ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.

¶ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?

ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.