ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.
TSK
TSK · ಎಫೆಸದವರಿಗೆ 5:21
مراجع Treasury of Scripture Knowledge في ಕನ್ನಡ IRV.
ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.
¶ ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.
¶ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.