TSK

TSK · ಎಸ್ತೇರಳು 3:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.

ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.

ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.

ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.

¶ ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.