TSK

TSK · ಎಸ್ತೇರಳು 8:1

مراجع Treasury of Scripture Knowledge في ಕನ್ನಡ IRV.

العودة إلى المقطع

ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.

ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.

ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.

ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.

¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›