TSK

TSK · ಎಸ್ತೇರಳು 9:10

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,

ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.

ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.

ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.

ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.

ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.