TSK

TSK · ವಿಮೋಚನಕಾಂಡ 1:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.

ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.

ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.

ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.

ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.

ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.