ಆದಿಕಾಂಡ 41:1
TSK
¶ ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
TSK
مراجع Treasury of Scripture Knowledge في ಕನ್ನಡ IRV.
¶ ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು.
ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.
ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.