¶ ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
TSK
TSK · ವಿಮೋಚನಕಾಂಡ 1:7
مراجع Treasury of Scripture Knowledge في ಕನ್ನಡ IRV.
ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.
ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
¶ ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.
ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.
¶ “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.