ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
TSK
TSK · ವಿಮೋಚನಕಾಂಡ 10:16
مراجع Treasury of Scripture Knowledge في ಕನ್ನಡ IRV.
¶ ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು
¶ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,
“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.