TSK

TSK · ವಿಮೋಚನಕಾಂಡ 10:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.

ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ.

ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.

¶ ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,