ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.
TSK
TSK · ವಿಮೋಚನಕಾಂಡ 11:6
مراجع Treasury of Scripture Knowledge في ಕನ್ನಡ IRV.
ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.
ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”
ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
‹ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.›
ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.