¶ “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
TSK
TSK · ವಿಮೋಚನಕಾಂಡ 12:19
مراجع Treasury of Scripture Knowledge في ಕನ್ನಡ IRV.
ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.
ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”
ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.