TSK

TSK · ವಿಮೋಚನಕಾಂಡ 12:23

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.

ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.

¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.

“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.