TSK

TSK · ವಿಮೋಚನಕಾಂಡ 12:28

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.

ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.

¶ ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.

ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.

ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.

ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.

¶ ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.

ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು.

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.

ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.