TSK

TSK · ವಿಮೋಚನಕಾಂಡ 14:11

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು.

ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.

ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

¶ ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.

ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.

ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.