TSK

TSK · ವಿಮೋಚನಕಾಂಡ 14:16

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.

“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.

ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.

“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.

¶ ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.