TSK

TSK · ವಿಮೋಚನಕಾಂಡ 14:19

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

¶ ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.

ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.