TSK

TSK · ವಿಮೋಚನಕಾಂಡ 14:29

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.

¶ ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.

ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.

ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.

ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.

ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?