TSK

TSK · ವಿಮೋಚನಕಾಂಡ 14:30

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.

ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.

ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.

ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

¶ ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.