TSK

TSK · ವಿಮೋಚನಕಾಂಡ 16:28

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

¶ ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.

ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.

ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.

ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,

¶ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?

ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.

¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

ಅದಕ್ಕಾತನು, ‹“ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ”› ಅಂದನು.