TSK

TSK · ವಿಮೋಚನಕಾಂಡ 16:7

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.

ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.

¶ ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.

ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.

ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.

ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.

ಯೇಸು ಇದನ್ನು ಕೇಳಿ, ‹“ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು”› ಎಂದು ಹೇಳಿದನು.