¶ ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
TSK
TSK · ವಿಮೋಚನಕಾಂಡ 19:18
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.
¶ ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.
¶ ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.
¶ ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.
ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.
ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.
‹ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;›
¶ ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.