¶ ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.
TSK
TSK · ವಿಮೋಚನಕಾಂಡ 19:4
مراجع Treasury of Scripture Knowledge في ಕನ್ನಡ IRV.
ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.
ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?
¶ ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.
ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.
ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.