ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.
TSK
TSK · ವಿಮೋಚನಕಾಂಡ 2:15
مراجع Treasury of Scripture Knowledge في ಕನ್ನಡ IRV.
ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯೆಜೆರ್” ಎಂದು ಹೆಸರಿಟ್ಟನು.
¶ ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.