ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
TSK · ವಿಮೋಚನಕಾಂಡ 20:24
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,
ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.
ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.
ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.
ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
‹ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ”› ಅಂದನು.
ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.